
ಲಕ್ನೋ: ಉತ್ತರ ಪ್ರದೇಶದಲ್ಲಿ ಮುಂದಿನ ಆರು ತಿಂಗಳ ಕಾಲ ಎಲ್ಲ ಮುಷ್ಕರಗಳನ್ನು ನಿಷೇಧಿಸಿ ಯೋಗಿ ಆದಿತ್ಯನಾಥ್ ಸರ್ಕಾರ ಆದೇಶ ಹೊರಡಿಸಿದೆ.
ಅಲ್ಲಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ದೇವೇಶ್ ಕುಮಾರ್ ಚತುರ್ವೇದಿ ಅಧಿಸೂಚನೆ ಹೊರಡಿಸಿದ್ದು, ಯಾವುದೇ ಸರ್ಕಾರಿ ಸೇವೆ, ನಿಗಮಗಳು ಮತ್ತು ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಮುಷ್ಕರ ನಡೆಸುವಂತಿಲ್ಲ. ಉಲ್ಲಂಘಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಕಳೆದ ಮೇ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರ ಕೋವಿಡ್ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ (ಎಸ್ಮಾ) ಹೇರಿ ಮುಷ್ಕರಗಳನ್ನು ನಿಷೇಧಿಸಿತ್ತು.




