
ಡಾ. ಡಿವೈ ಪಾಟಿಲ್ ಸ್ಫೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ – ಬೌಲಿಂಗ್ನಲ್ಲಿ ಮಿಂಚಿದ ಹಾರ್ದಿಕ್ ಪಡೆ 37 ರನ್ಗಳ ಜಯ ತನ್ನದಾಗಿಸಿತು. ಈ ಮೂಲಕ ಜಿಟಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಆಡಿದ ಐದು ಪಂದ್ಯಗಳಲ್ಲಿ ಕೇವಲ ಒಂದು ಸೋಲನ್ನಷ್ಟೆ ಕಂಡು ನಾಲ್ಕು ಗೆಲುವಿನೊಂದಿಗೆ 8 ಅಂಕ ಸಂಪಾದಿಸಿದೆ.
ಇತ್ತ ಸ್ಯಾಮ್ಸನ್ ಪಡೆ ಎರಡನೇ ಸೋಲಿನ ಮೂಲಕ ಮೂರನೇ ಸ್ಥಾನಕ್ಕೆ ಕುಸಿದಿದೆ. ಗುಜರಾತ್ ನೀಡಿದ್ದ ದೊಡ್ಡ ಟಾರ್ಗೆಟ್ ಅನ್ನು ಬೆನ್ನಟ್ಟುವಾಗ ಆರ್ಆರ್ ಸ್ಫೋಟಕ ಆರಂಭ ಪಡೆದುಕೊಂಡರೂ ನಂತರ ಸರಾಗವಾಗಿ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕನೇ ಈ ಬಾರಿ ಕೂಡ ಮತ್ತೊಮ್ಮೆ ವಿಫಲವಾಗಿದ್ದು ತಂಡಕ್ಕೆ ಪ್ರಮುಖ ಹಿನ್ನಡೆಯಾಯಿತು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ ಉತ್ತಮ ಆರಂಭ ಪಡೆಯಲು ವಿಫಲಗೊಂಡಿತು. ಆರಂಭಿಕ ಬ್ಯಾಟರ್ ಮ್ಯಾಥ್ಯೂ ವೇಡ್ 12ರನ್‌ಗೆ ರನೌಟ್‌ಗೆ ಬಲಿಯಾದರೆ, ಶುಭ್ಮನ್ ಗಿಲ್ 13ರನ್‌ಗಳಿಸಿದರು. ಇನ್ನು ಸಾಯಿ ಸುದರ್ಶನ್ ಬದಲು ಸ್ಥಾನ ಪಡೆದಿದ್ದ ಆಲ್‌ರೌಂಡರ್ ವಿಜಯ್ ಶಂಕರ್ ಕೇವಲ 2ರನ್‌ಗೆ ಕುಲ್‌ದೀಪ್ ಸೇನ್‌ಗೆ ವಿಕೆಟ್ ಒಪ್ಪಿಸಿದ್ದು ಬಹಳ ನಿರಾಸೆ ಮೂಡಿಸಿತು.
53ರನ್‌ಗೆ ಮೂರು ವಿಕೆಟ್ ಕಳೆದುಕೊಂಡ ಗುಜರಾತ್ಗೆ ಮತ್ತೊಮ್ಮೆ ನಾಯಕ ಹಾರ್ದಿಕ್ ಪಾಂಡ್ಯ ಆಧಾರವಾದರು. ದೇವದತ್ ಪಡಿಕ್ಕಲ್ (0) ಹಾಗೂ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಕ್ರೀಸಿಗಿಳಿದಿದ್ದ ಆರ್. ಅಶ್ವಿನ್ (8) ನಿರಾಸೆ ಮೂಡಿಸಿದರು. ಅತ್ತ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಬಟ್ಲರ್ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆದರೆ ಪವರ್ ಪ್ಲೇಯ ಕೊನೆಯ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.
24 ಎಸೆತಗಳನ್ನು ಎದುರಿಸಿದ ಬಟ್ಲರ್ 54 ರನ್ (8 ಬೌಂಡರಿ, 3 ಸಿಕ್ಸರ್) ಗಳಿಸಿದರು. ಇದಾದ ಬೆನ್ನಲ್ಲೇ ನಾಯಕ ಸಂಜು ಸ್ಯಾಮ್ಸನ್ (11) ರನೌಟ್ ಆದರು. ರಸ್ಸಿ ವಾನ್ ಡರ್ ದುಸಾನ್ (6) ಪೆವಿಲಿಯನ್ ಸೇರುವುದರೊಂದಿಗೆ ರಾಜಸ್ಥಾನ್ 90 ರನ್ನಿಗೆ ಐದು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಕೊನೆಯ ಹಂತದಲ್ಲಿ ಶಿಮ್ರಾನ್ ಹೆಟ್ಮೆಯರ್ (29), ರಿಯಾನ್ ಪರಾಗ್ (18) ಹಾಗೂ ಜೇಮ್ಸ್ ನೀಶಮ್ (17) ಪ್ರಯತ್ನಿಸಿದರೂ ಗೆಲುವು ದಾಖಲಿಸಲು ಸಾಧ್ಯವಾಗಲಿಲ್ಲ.
ಗುಜರಾತ್ ಪರ ಲಾಕಿ ಫರ್ಗ್ಯುಸನ್ ಹಾಗೂ ಚೊಚ್ಚಲ ಪಂದ್ಯ ಆಡಿದ ಯಶ್ ದಯಾಲ್ ತಲಾ ಮೂರು ವಿಕೆಟ್ ಕಬಳಿಸಿದರು. ಈ ಜಯದೊಂದಿಗೆ ಗುಜರಾತ್ ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನಕ್ಕೇರಿದರೆ ಆರ್ಆರ್ ಮೂರನೇ ಸ್ಥಾನಕ್ಕ ಕುಸಿಯಿತು.




