Breaking NewsLatestಕ್ರೀಡೆರಾಷ್ಟ್ರೀಯ
Khel Ratna Award: ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮುಂದೆ ಮೇಜರ್ ಧ್ಯಾನಚಂದ್ ಖೇಲ್ ರತ್ನ

ಹೊಸದಿಲ್ಲಿ: ಜನರ ಭಾವನೆಗಳಿಗೆ ಬೆಲೆ ಕೊಡುವ ದೃಷ್ಟಯಿಂದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಬದಲಾಯಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ತಮ್ಮ ಟ್ವಿಟರ್ ಸಂದೇಶದ ಮೂಲಕ ಈ ವಿಷಯವನ್ನು ತಿಳಿಸಿರುವ ಪ್ರಧಾನಿಯವರು ಹೆಸರು ಬದಲಾವಣೆಗೆ ಸಾಕಷ್ಟು ಬೇಡಿಕೆಗಳು ಬಂದಿದ್ದು, ಅವರ ಭಾವನೆಗಳನ್ನು ಗೌರವಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿ ಇದಾಗಿದ್ದು 1991-92ರಲ್ಲಿ ಕೇಂದ್ರ ಸರಕಾರ ಸ್ಥಾಪಿಸಿದ್ದು, ವಿಶ್ವನಾಥನ್ ಆನಂದ್ ಈ ಗೌರವಕ್ಕೆ ಪಾತ್ರರಾದ ಮೊದಲ ಕ್ರೀಡಾ ಸಾಧಕ.
