Uncategorized

ಧಾರವಾಡ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಮತದಾನ ಆರಂಭ: ಕರ್ನಾಟಕ ಕಾಲೇಜು ಆವರಣದಲ್ಲಿ‌ ಮತದಾನಕ್ಕೆ ವ್ಯವಸ್ಥೆ

ಧಾರವಾಡ: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯ ಘಟಕದ ಅಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಇಂದು ಮತದಾನ ನಡೆಯಿತ್ತಿದ್ದು, ಧಾರವಾಡದಲ್ಲಿಯು ಕೂಡಾ ಬೆಳಿಗ್ಗೆ 8 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ.

ಧಾರವಾಡದ ಕರ್ನಾಟಕ ಕಾಲೇಜಿನ ಕಲಾ ವಿಭಾಗದಲ್ಲಿ ಮತದಾನ ಆರಂಭಗೊಂಡಿದೆ. ಇನ್ನೂ ಉಳಿದಂತೆ ತಾಲೂಕುಗಳಲ್ಲಿ ತಹಶೀಲ್ದಾರ್ ಕಚೇರಿಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಒಟ್ಟು 5,199 ಮತದಾರರಿದ್ದು ಈ ಪೈಕಿ ಧಾರವಾಡದಲ್ಲಿ 1790, ಹುಬ್ಬಳ್ಳಿಯಲ್ಲಿ 1512, ಕುಂದಗೋಳದಲ್ಲಿ 755, ಅಣ್ಣಿಗೇರಿಯಲ್ಲಿ 388, ನವಲಗುಂದದಲ್ಲಿ 303, ಕಲಘಟಗಿಯಲ್ಲಿ 209, ಅಳ್ಳಾವರದಲ್ಲಿ 154 ಹಾಗೂ ಹುಬ್ಬಳ್ಳಿ ಗ್ರಾಮೀಣದಲ್ಲಿ 88 ಮತದಾರರನ್ನು ಹೊಂದಿದೆ.

ಪರಿಷತ್ತು ನೀಡಿರುವ ಭಾವಚಿತ್ರ ಸಹಿತ ಗುರುತಿನ ಚೀಟಿ ತರದವರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಸರ್ಕಾರದಿಂದ ಮಾನ್ಯತೆ ಹೊಂದಿರುವ, ಭಾವಚಿತ್ರ ಇರುವ ಗುರುತಿನ ಚೀಟಿ ತೋರಿಸಿದರೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button