Uncategorizedಮೆಟ್ರೋರಾಜ್ಯರಾಷ್ಟ್ರೀಯ
ವಿದ್ಯುತ್ ಖಾಸಗೀಕರಣ ವಿರೋಧಿಸಿ ಆ.10ಕ್ಕೆ ಪ್ರತಿಭಟನೆ

ಬೆಂಗಳೂರು: ಇಂಧನ ಇಲಾಖೆಯ ವಿದ್ಯುತ್ ವಿಭಾಗದ ನೌಕರರು ಆ.10ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ವಿದ್ಯುತ್ ಕಾಯ್ದೆ ತಿದ್ದುಪಡಿ, ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ನೌಕರರ ಸಂಘಟನೆಗಳು ತಿಳಿಸಿವೆ.
ವಿದ್ಯುತ್ ಕಂಪನಿಗಳಿಂದ ಆಗಿರುವ ನಷ್ಟವನ್ನು ಸರಿದೂಗಿಸುವ ನೆಪದಲ್ಲಿ ಕೇಂದ್ರ ಸರ್ಕಾರ ಖಾಸಗೀಕರಣಕ್ಕೆ ಮುಂದಾಗಿದೆ. ಇದರಿಂದ ರೈತರು, ಬಡವರು ತೀವ್ರ ಸಂಕಷ್ಟ ಅನುಭವಿಸಬೇಕು. ಭಾಗ್ಯಜ್ಯೋತಿ ಉಚಿತ ಯೋಜನೆಗೆ ಕತ್ತರಿ ಬೀಳುವ ಸಾಧ್ಯತೆಯಿದೆ ಎಂದು ಸಂಘಟನೆಗಳು ಹೇಳಿವೆ.
ಕೇಂದ್ರದ ಖಾಸಗೀಕರಣ ನೀತಿ ವಿರೋಧಿಸಿ ಮುಷ್ಕರಕ್ಕೆ ಹಲವು ಸಂಘ-ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸುವ ಸಾಧ್ಯತೆಯಿದೆ.

